ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು? ಏಕೆ? ಹಿಂದೂಗಳ ಮನೆಗಳನ್ನು ಹಾಗೂ ಮನಸ್ಸುಗಳನ್ನು ತುಳಸಿ ವೃಕ್ಷವು ಏಕಪ್ರಕಾರವಾಗಿ ಅಲಂಕರಿಸುತ್ತದೆ. ಅಂಗಳದಲ್ಲಿ ತುಳಸಿ ವೃಂದಾವನವಿರುವ ಮನೆಗಳನ್ನು ಆಸ್ತಿಕ ಹಿಂದೂಗಳ ಮನೆಗಳೆಂದು ಸುಲಭವಾಗಿ ಗುರುತಿಸಬಹುದು. ತುಳಸಿ ಕಾನನಂ ಯತ್ರ ಯತ್ರಪದ್ಮವ ನಾನಿಚ| ವಸಂತಿ ವೈಷ್ಣವಾಯತ್ರ ತತ್ರ ಸನ್ನಿಹಿತೋ ಹರಿ:|| ಅಂದರೆ ತುಳಸಿವನವು ಹಬ್ಬಿರುವ ಜಾಗದಲ್ಲಿ ಶ್ರೀ ಹರಿಯು ಸದಾ ವಾಸಮಾಡುತ್ತಾನೆ. ಶೈವರು, ವೈಷ್ಣವರು, ಗಾಣಸತ್ಯರು, ದೇವೀ ಉಪಾಸಕರು ಮೊದಲಾದ ಎಲ್ಲಾ ಪಂಥಗಳ ಆಸ್ತಿಕ ಹಿಂದೂಗಳೂ ತಮ್ಮ ಮನೆಯಂಗಳಗಳಲ್ಲಿ ತುಳಸಿ ವೃಂದಾವನ ನಿರ್ಮಿಸಿ ತುಳಸಿಯನ್ನು ನೆಟ್ಟು ಪೂಜಿಸುತ್ತಾರೆ. ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು ? ಏಕೆ? ಹಗಲು ಹೊತ್ತಿನಲ್ಲಿ ವಾತಾವರಣದಲ್ಲಿನ ಅನಿಷ್ಟ ಶಕ್ತಿಗಳು ಸುಪ್ತವಾಗಿದ್ದು ಸೂರ್ಯಾಸ್ತದ ಬಳಿಕ ಅವುಗಳ ಪ್ರಕಟೀಕರಣದಿಂದ ಜೀವಗಳಿಗೆ ಅಪಾರ ತೊಂದರೆಯಾಗತೊಡಗುತ್ತದೆ. ಇದರಿಂದಾಗಿಯೇ ಸಂಧ್ಯಾಕಾಲದಲ್ಲಿ ದೃಷ್ಟಿ ತಗಲುವುದು, ರಾತ್ರಿ ಕಾಲದಲ್ಲಿ ದುಷ್ಕೃತ್ಯಗಳು ನಡೆಯುವುದು ಸಾಮಾನ್ಯವಾಗಿದೆ. ಇಂತಹ ತೊಂದರೆಗಳಿಂದ ಪಾರಾಗಲು ಸಂಧ್ಯಾಕಾಲದಲ್ಲಿ ದೇವರಿಗೆ ದೀಪ ಹಚ್ಚುವುದು, ಊದುಬತ್ತಿ ಉರಿಸುವುದು, ಶಂಖಧ್ವನಿ ಮಾಡುವುದು, ಜಾಗಟೆ, ತಾಳ ಬಾರಿಸುವುದು, ಭಜನೆ ಮಾಡುವುದು, ಉಪನಯನವಾದವರು ಸಂಧ್ಯಾವಂದನೆ ಮಾಡುವುದು, ಭಸ್ಮಧಾರಣೆ ಇ...