ಬ್ರಾಹ್ಮಣ ಅಂದರೆ ಏನು ಎಂಬುದನ್ನು ಪರೀಕ್ಷಿಸೋಣ.. ಅದು ಒಂದು ಜೀವವೆ?ಅಥವಾ ಅದು ಶರೀರವೆ? ಇಲ್ಲಾ ಅದೊಂದು ವರ್ಗವೆ? ಜ್ಞಾನವೆ? ಕರ್ಮವೆ? ಅಥವಾ ಅದೊಂದು ಧಾರ್ಮಿಕ ಕ್ರಿಯೆಯೆ?ಯಾವುದನ್ನು ಬ್ರಾಹ್ಮಣ ಎನ್ನುತ್ತೇವೆ ??ನೋಡೋಣ... ಜೀವವು ಬ್ರಾಹ್ಮಣವೆ? ಎಂದು ಪ್ರಾರಂಭಿಸಿದರೆ ಉತ್ತರ ಅಲ್ಲ ಎಂದಾಗುತ್ತದೆ. ಯಾಕೆಂದರೆ ಪೂರ್ವಜನ್ಮ ಹಾಗೂ ಪುನರ್ಜನ್ಮಗಳಲ್ಲಿ ಅದೇ ಜೀವ ಮುಂದುವರಿಯುತ್ತದೆ. ಪ್ರಾರಬ್ಧ ಕರ್ಮದಿಂದ ಕೆಲವೊಮ್ಮೆ ವಿಭಿನ್ನ ಪ್ರಾಣಿ ಪಕ್ಷಿಗಳಾಗಿಯೂ ಅದೇ ಜೀವ ಮುಂದುವರಿಯುವುದರಿಂದ ಜೀವ ಎಂಬುದು ಬ್ರಾಹ್ಮಣ ಅಲ್ಲ. ಹಾಗಾದರೆ ದೇಹ ಬ್ರಾಹ್ಮಣವೆ? ಅಲ್ಲ, ಅದು ಪಂಚಭೂತಗಳಿಂದ ಮಾಡಲ್ಪಟ್ಟು ಬ್ರಾಹ್ಮಣ, ಕ್ಷತ್ರಿಯ, ವೈಶ್ಯ ಮತ್ತು ಶೂದ್ರ ಎಂಬ ಎಲ್ಲ ಮಾನವರಿಗೂ ಅದು ಸಮಾನವಾಗಿರುವುದರಿಂದ ದೇಹ ಬ್ರಾಹ್ಮಣ ಅಲ್ಲ. ಹಾಗಾದರೆ ಜಾತಿ ಬ್ರಾಹ್ಮಣವೆ? ಅಲ್ಲ, ಏಕೆಂದರೆ ಅನೇಕ ಋಷಿಗಳು ಬೇರೆ ಬೇರೆ ಜಾತಿಯಿಂದ ಹುಟ್ತಿದವರಾಗಿದ್ದಾರೆ. ಋಷ್ಯಶೃಂಗನು ಜಿಂಕೆಯಿಂದ, ಕೌಶಿಕನು ಕುಶ (ಗರಿಕೆ) ಹುಲ್ಲಿನಿಂದ, ಜಂಬೂಕನು ನರಿಯಿಂದ ವಾಲ್ಮೀಕಿಯು ಹುತ್ತದಿಂದ, ವ್ಯಾಸನು ಮೀನುಗಾರನ ಮಗಳಿಂದ, ಗೌತಮನು ಮೊಲದಿಂದ ವಸಿಷ್ಠನು ಊರ್ವಶಿಯಿಂದ, ಅಗಸ್ತ್ಯನು ನೀರಿನ ಕುಂಭದಿಂದ ಹೀಗೆ ಅನೇಕ ಋಷಿಗಳು ಎಲ್ಲೆಲ್ಲೊ ಹೇಗೋ ಜನಿಸಿದರು. ಆದರೆ ಅವರು ತಮ್ಮ ಆಧ್ಯಾತ್ಮಿಕ ಸಾಧನೆಗಳಿಂದ ಮಹಾಜ್ಞಾನಿಗಳಾಗಿ ದಿವ್ಯೋಪದೇಶ ಮಾಡುವ ಸಂತರಾದರು. ಆದ್...